Keep in touch...
ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ - ನನ್ನ ಇ-ಮೇಲ್ : gshattigoudar@gmail.com ಮೊಬೈಲ್: +9199454 79292 (only SMS / WhatsApp)
Sunday, 27 November 2011
ಏಕೆ ಸೋಲುತ್ತೇವೆ?
ಗೆಲ್ಲುವ ಎಲ್ಲ ಅವಕಾಶಗಳಿದ್ದೂ ಒಬ್ಬ ಮನುಷ್ಯ ಸೋಲುತ್ತಿದ್ದಾನೆ ಅಂದರೆ ಆತ ದುರದೃಷ್ಟವಂತ ಅನ್ನುತ್ತೀರಾ? ಖಂಡಿತ ಇಲ್ಲ. ಆತನಿಗೇ ಗೊತ್ತಿಲ್ಲದೆ ಆತನನ್ನು ಅನೇಕ ಸಂಗತಿಗಳು ಕೈಹಿಡಿದು ಜಗ್ಗುತ್ತಿರುತ್ತವೆ. ಅಹಂಕಾರವೊಂದೇ ಸಾಕು; ಅದು ಗೆಲುವಿನ ಮೊದಲ ಶತ್ರು . ಸೋತೇನೆಂಬ ಭಯ, ಆತ್ಮ ನಿಂದನೆ, ಕೀಳರಿಮೆ, ಸರಿಯಾದ ಪ್ಲಾನ್ ಇಲ್ಲದಿರುವುದು, ಖಚಿತವಾದ ಗೋಲ್ಗಳಿಲ್ಲದಿರುವುದು, ಮಾಡಬೇಕು ಎಂದುಕೊಂಡ ಕೆಲಸಗಳನ್ನು ಮುಂದಕ್ಕೆ ಹಾಕುತ್ತಾ ಹೋಗುವುದು, ಮನೆ ಮಂದಿಯೆಲ್ಲರ ಜವಾಬ್ದಾರಿಯನ್ನು ಹೊತ್ತು ಬಿಡುವುದು, ಯಾವುದರ ಮೇಲೂ ಗಮನ ಕೇಂದ್ರೀಕರಿಸಲು ಸಾದ್ಯವಾಗದೇ ಹೋಗುವುದು, ಚಿಕ್ಕ ಪುಟ್ಟ ಲಾಭಗಳಿಗಾಗಿ ದೊಡ್ಡ ಮಟ್ಟದ ದೂರದರ್ಶಿತ್ವ ಕಳೆದುಕೊಳ್ಳುವುದು, ಪ್ರತಿಯೊಂದನ್ನೂ ತಾನೇ ಮಾಡುತ್ತಾ ಹೋಗುತ್ತೇನೆನ್ನುವುದು, ಕಮಿಟ್ಮೆಂಟೇ ಇಲ್ಲದಿರುವುದು, ಸರಿಯಾದ ತರಬೇತಿ ಇಲ್ಲದೇ ಹೋಗುವುದು, ಹಿಡಿದ ಕೆಲದ ಮುಗಿಸಿ ತೀರುತ್ತೇನೆ ಎಂಬ ಹಟದ ಕೊರತೆ, ಯಾವುದನ್ನು ಮೊದಲು ಮಾಡಬೇಕು ಎಂಬ ಪರಿಜ್ಞಾನವಿಲ್ಲದಿರುವುದು-ಇವೆಲ್ಲವೂ ಒಬ್ಬ ಮನುಷ್ಯನನ್ನು ಗೆಲುವಿನಿಂದ ಹೊಂದಕ್ಕೆ ಎಳೆದುಬಿಡುತ್ತವೆ
Subscribe to:
Post Comments (Atom)
No comments:
Post a Comment